ಹುಬ್ಬಳ್ಳಿ: ಸಾರ್ವಜನಿಕರಿಗೆ ಅನುಕೂಲವಾಗುವಂತೆ 26 ಇಲಾಖೆಗಳ 64 ಸೇವೆಗಳನ್ನು ಕರ್ನಾಟಕ ಒನ್ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಈ ಕೇಂದ್ರಗಳಲ್ಲಿ ಕಂಪ್ಯೂಟರ್ ಹಾಗೂ ಇತರೆ ತಾಂತ್ರಿಕ ದೋಷಗಳು ಬರದಂತೆ ಉತ್ತಮ ರೀತಿಯಲ್ಲಿ ಅಧಿಕಾರಿಗಳು ಕೇಂದ್ರದ ನಿರ್ವಹಣೆ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಪ್ರಸಾದ್ ಶಾಸಕ ಅಬ್ಬಯ್ಯನವರು ಗೌರವಪೂರ್ವಕವಾಗಿ ಎಲ್ಲಾ ಜನಪ್ರತಿನಿಧಿಗಳನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಮಹಿಳೆಯರ ಬೇಡಿಕೆಯಂತೆ ಇನ್ನೊಂದು ಹೆಚ್ಚುವರಿ ಅಂತಸ್ತನ್ನು ನಿರ್ಮಿಸಿ ಮಹಿಳಾ ಭವನಕ್ಕೆ ನೀಡಲಾಗುವುದು. ಬಂಕಾಪುರದಿಂದ ಚನ್ನಮ್ಮ ವೃತ್ತದವರೆಗೆ ನಾಲ್ಕುದ ಪಥ ರಸ್ತೆ ನಿರ್ಮಿಸಲಾಗಿದೆ. ನೂತನ ಫೈ ಓವರ್ ನಿರ್ಮಾಣದ ಸಂದರ್ಭದಲ್ಲಿ ಬಂಕಾಪುರದ ವರೆಗೂ ಮೇಲುಸೇತುವೆಯನ್ನು ವಿಸ್ತರಣೆ ಮಾಡಲಾಗುವುದು. ಈ ಭಾಗದ ಶಾಲೆಗಗಳಿಗೆ ಡೆಸ್ಕ್ ಹಾಗೂ ಸ್ಮಾರ್ಟ್ ಬೋರ್ಡ್‍ಗಳನ್ನು ಸಂಸದರ ಅನುದಾನದಲ್ಲಿ ನೀಡಲಾಗಿದೆ ಎಂದರು.
Kshetra Samachara
06/12/2020 06:04 pm