ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಸಮಿತಿ ರಚನೆ

ಧಾರವಾಡ: ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಪಂ ವ್ಯಾಪ್ತಿಗೆ ಮಾತ್ರ ಅನ್ವಯಿಸುವಂತೆ ನೀತಿ ಸಂಹಿತೆ ಮತ್ತು ಸದಾಚಾರ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರನ್ನು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಎಂದು ನೇಮಿಸಿ, ಅವರ ಮೇಲುಸ್ತುವಾರಿಯಲ್ಲಿ ಸಮಿತಿ ರಚಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ 7 ತಾಲೂಕುಗಳ ಮಾದರಿ ನೀತಿ ಸಂಹಿತೆ ಅನುಷ್ಠಾನ ಸಮಿತಿಗಳಿಗೆ ಆಯಾ ತಾಲೂಕಿನ ತಾ.ಪಂ ಇಒ ಅವರನ್ನು ಅಧ್ಯಕ್ಷರನ್ನಾಗಿ ಮತ್ತು ಆಯಾ ವೃತ್ತ ಆರಕ್ಷಕ ನಿರೀಕ್ಷಕರು, ಆರಕ್ಷಕ ನಿರೀಕ್ಷಕರು, ಆರಕ್ಷಕ ಉಪ ನಿರೀಕ್ಷಕರು, ತಾಲೂಕುಗಳ ಅಬಕಾರಿ ಉಪ ನಿರೀಕ್ಷಕರು ಮತ್ತು ಆಯಾ ಹೋಬಳಿಯ ಕಂದಾಯ ನಿರೀಕ್ಷಕರನ್ನು ಸದಸ್ಯರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.

ಸಮಿತಿ ಸದಸ್ಯರು ತಮ್ಮ ತಾಲೂಕಿನ ಗ್ರಾಪಂಗಳ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕ್ರಮ ವಹಿಸಬೇಕು. ಸದ್ಯದ ನಿಯಮಗಳಂತೆ ಹಾಗೂ ರಾಜ್ಯ ಚುನಾವಣಾ ಆಯೋಗ ಹೊರಡಿಸುವ ಆದೇಶಗಳನ್ವಯ ಗ್ರಾಮೀಣ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಕಟ್ಟು ನಿಟ್ಟಾಗಿ ಪಾಲಿಸಲು ನಿಗಾ ವಹಿಸುವಂತೆ ಆದೇಶಿಸಿದ್ದಾರೆ.

ನೋಡಲ್ ಅಧಿಕಾರಿಗಳ ನೇಮಕ: ಗ್ರಾಪಂ ಚುನಾವಣೆ ಸಂದರ್ಭದಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮ ಮಾರ್ಗಸೂಚಿ ಪಾಲಿಸಿ ಚುನಾವಣೆ ಪ್ರಕ್ರಿಯೆ ಕೈಗೊಳ್ಳಲು, ಜಿಲ್ಲಾ ಮಟ್ಟದಲ್ಲಿ ಕೋವಿಡ್ -19 ನಿರ್ವಹಣೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದಾರೆ. ಧಾರವಾಡ ಹಾಗೂ ಅಳ್ನಾವರ ತಾಲೂಕಿಗೆ ಧಾರವಾಡ ತಾಲೂಕು ಆರೋಗ್ಯಾಧಿಕಾರಿ, ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿಗೆ ನವಲಗುಂದ ತಾಲೂಕು ಆರೋಗ್ಯಾಧಿಕಾರಿ, ಹುಬ್ಬಳ್ಳಿ ಕಲಘಟಗಿ , ಕುಂದಗೋಳಕ್ಕೆ ಆಯಾ ತಾಲೂಕಿನ ಆರೋಗ್ಯಾಧಿಕಾರಿಯನ್ನು ನೇಮಿಸಿದ್ದಾರೆ. ಕೋವಿಡ್ -19 ರ ಕುರಿತು ಮುನ್ನೆಚ್ಚರಿಕೆ ಕ್ರಮಗಳು ಮತ್ತು ಚುನಾವಣೆ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾ ಕಾರ್ಯಾಲಯದಿಂದ ಕಾಲಕಾಲಕ್ಕೆ ನೀಡುವ ಮಾರ್ಗಸೂಚಿ ಹಾಗೂ ನಿರ್ದೇಶನಗಳಂತೆ ತಪ್ಪದೆ ಕ್ರಮವಹಿಸಲು ಸೂಚಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

07/12/2020 10:06 am

Cinque Terre

44.69 K

Cinque Terre

0

ಸಂಬಂಧಿತ ಸುದ್ದಿ