ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಿಕ್ಷಕರ ಸಮಸ್ಯೆ ಕುರಿತು ಚರ್ಚಿಸಲು ಬೆಂಗಳೂರಿಗೆ ಹೊರಟ ಹೊರಟ್ಟಿ

ಧಾರವಾಡ: ಸರ್ಕಾರಿ ಅನುದಾನಿತ ಶಾಲಾ ಶಿಕ್ಷಕರ ಹಲವಾರು ಸಮಸ್ಯೆಗಳ ಸಂಬಂಧ ಚರ್ಚಿಸುವುದಕ್ಕೆ ಶಿಕ್ಷಣ ಸಚಿವರು ಸಭೆ ಮಾಡಲು ನನಗೆ ಕಾಲಾವಕಾಶ ಕೇಳಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಶಾಲಾ ಶಿಕ್ಷಕರ ಬೇಡಿಕೆಗಳ ಸಲುವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳಿವೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕೊರೊನಾದಿಂದಾಗಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಆದಷ್ಟು ಬೇಗ ಶಿಕ್ಷಕರ ನೇಮಕಾತಿ ಆಗಬೇಕು. ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಶಿಕ್ಷಕರಿಗೆ ಪೆನ್ಶನ್ ಇಲ್ಲ ಸರ್ಕಾರಿ ಶಿಕ್ಷಕರಿಗೆ ನೀಡುವ ಸೌಲಭ್ಯವನ್ನೇ ಖಾಸಗಿ ಶಿಕ್ಷಕರಿಗೂ ನೀಡಬೇಕು. ಈ ಎಲ್ಲ ವಿಷಯಗಳ ಸಂಬಂಧ ಸಚಿವರೊಂದಿಗೆ ಚರ್ಚಿಸಲು ಬೆಂಗಳೂರಿಗೆ ಹೊರಟಿದ್ದೇನೆ ಎಂದರು.

12 ಜನ ಎಂಎಲ್ ಸಿಗಳು ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದಾರೆ. ಹೀಗಾಗಿ ಪರಿಷತ್ ಸಭಾಪತಿ ರಾಜೀನಾಮೆ ಕೊಡಲೇಬೇಕು. ಆದರೆ, ಜೆಡಿಎಸ್ ಪಕ್ಷವನ್ನು ಪರೀಕ್ಷೆ ಮಾಡಲು ಸಿದ್ದರಾಮಯ್ಯ ಹೊರಟಿದ್ದಾರೆ ಎಂದರು.

Edited By : Nagesh Gaonkar
Kshetra Samachara

Kshetra Samachara

07/12/2020 03:47 pm

Cinque Terre

25.36 K

Cinque Terre

0

ಸಂಬಂಧಿತ ಸುದ್ದಿ