ಹುಬ್ಬಳ್ಳಿ: ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
25ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್ ಗೆ ಬೆಂಬಲಿಸಿವೆ. ಮಹದಾಯಿ, ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ, ಹುಬ್ಬಳ್ಳಿ ನಾಗರಿಕ ಹೋರಾಟ ಸಮಿತಿ, ಸಿಐಟಿಯು, ಸಿಪಿಐ(ಎಂ), ಎಐಟಿಯುಸಿ, ಕೆಪಿಆರ್ ಎಸ್, ಅಟೋ, ಬೀದಿಬದಿ ವ್ಯಾಪಾರಿಗಳ, ದಲಿತ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ನಡೆಸಲಾಗುತ್ತಿದೆ. ರೈತ ಸಂಘಟನೆಗಳಿಗೆ ಕನ್ನಡ ಪರ ಸಂಘಟನೆಗಳ ಸಾಥ್ ನೀಡಿದ್ದು, ಇಂದು ಬೆಳಗ್ಗೆಯಿಂದಲೇ ಹೋರಾಟಗಾರರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಹುಲ್ಲಿಗೆ ಬೆಂಕಿ ಹಚ್ಚಿ ಕನ್ನಡ ಪರ, ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಪ್ರತಿಭಟನೆ ನೆಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಹೊಸುರ ವೃತ್ತ, ಹಳೇ ಬಸ್ ನಿಲ್ದಾಣದ ಎದುರು ಸಂಚಾರ ತಡೆದ ಕನ್ನಡಪರ ಹೋರಾಟಗಾರರು, ರಸ್ತೆ ಮೇಲೆ ಮಲಗಿ ಸಾರಿಗೆ ಸಂಚಾರ ತಡೆಯಲು ಯತ್ನಿಸಿದರು.ಹುಬ್ಬಳ್ಳಿ- ಧಾರವಾಡ ಮಧ್ಯೆ ಸಂಚರಿಸುವ ಬಸ್ ತಡೆದು ಆಕ್ರೋಶಗೊಂಡರು. ಮುಂಜಾಗ್ರತ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ವಾಣಿಜ್ತ ನಗರಿಯಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
Kshetra Samachara
08/12/2020 08:29 am