ಧಾರವಾಡ: ಕೇಂದ್ರ ಸರ್ಕಾರ ರೈತರಿಗೆ ಮರಣಶಾಸನವಾಗುವಂತ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿ ರೈತ ಸಂಘಟನೆಗಳು ಇಂದು ಭಾರತ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಎಡಪಕ್ಷಗಳ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣಾ ರಾಜ್ಯಗಳ ರೈತರು ಎಪಿಎಂಸಿ ಹಾಗೂ ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಅದರ ಬೆಂಬಲಾರ್ಥ ಹಾಗೂ ರೈತರಿಗೆ ಮಾರಕವಾಗುವ ಈ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಈ ಭಾರತ ಬಂದ್ ಮಾಡಲಾಗುತ್ತಿದೆ.
ಇಂದು ಬೆಳಿಗ್ಗೆಯೇ ಕೆಲ ರೈತ ಸಂಘಟನೆ ಕಾರ್ಯಕರ್ತರು ರಸ್ತೆಗಿಳಿದಿದ್ದು, ಕಟ್ಟುನಿಟ್ಟಾಗಿ ಭಾರತ ಬಂದ್ ಮಾಡಲು ಮುಂದಾಗಿದ್ದಾರೆ.
Kshetra Samachara
08/12/2020 08:52 am