ಧಾರವಾಡ : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದು, ನಗರದ ನಗರದ ಜುಬ್ಲಿ ವೃತ್ತದ ಬಳಿ ಜಿಲ್ಲಾ ಘಟಕದ ಜಯ ಕರ್ನಾಟಕ ಸಂಘಟನೆ ಬೆಂಬಲ ವ್ಯಕ್ತಪಡಿಸಿ ಎತ್ತಿನಬಂಡಿ ಎಳೆದು ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರೈತ ವಿರೋಧಿ ಕಾಯಿದೆ ಜಾರಿಗೆ ತಂದಿದೆ,ದೆಹಲಿಯಲ್ಲಿ ಶಾಂತಿಯುತ ಹೋರಾಟ ನಡೆಸುತ್ತಿರುವ ರೈತರ ಮೇಲೆ ಹಲ್ಲೆ ಮಾಡಿಸಿದ ಕೇಂದ್ರ ಸರ್ಕಾರದ ನಡೆಯನ್ನು ಬಲವಾಗಿ ಖಂಡಿಸುತ್ತೇವೆ.ದೇಶದ ರೈತರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಬೇಕು,ಕೂಡಲೇ ಕಾಯಿದೆ ಹಿಂಪಡೆಯಲು ಜಯ ಕರ್ನಾಟಕ ಸಂಘದಿಂದ ಒತ್ತಾಯಿಸಿದರು.
Kshetra Samachara
08/12/2020 10:17 am