ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಐದನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಧಾರವಾಡ: ಅನುದಾನ ರಹಿತ, ಅನುದಾನ ಸಹಿತ ಶಿಕ್ಷಣ ಸಂಸ್ಥೆಗಳು ಹಾಗೂ ಖಾಸಗಿ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ರಾಜ್ಯದ ವಿವಿಧ ಭಾಗಗಳಿಂದ ಬಂದ ಹಲವಾರು ಶಿಕ್ಷಕರು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ನಿರ್ಲಕ್ಷ್ಯದಿಂದಾಗಿ ಹಲವು ವರ್ಷಗಳಿಂದ ಶಿಕ್ಷಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಆದಷ್ಟು ಬೇಗ ಹೊರಟ್ಟಿ ವರದಿ ಜಾರಿಗೆ ತರಬೇಕು ಇಲ್ಲವಾದರೆ ಮುಂದೆ ಹೋರಾಟ ಇನ್ನೂ ಉಗ್ರ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಖಾಸಗಿ ಸಂಸ್ಥೆಗಳ ಶಿಕ್ಷಕರು ಸರ್ಕಾರವನ್ನು ಎಚ್ಚರಿಸಿದರು.

Edited By :
Kshetra Samachara

Kshetra Samachara

09/12/2020 06:58 pm

Cinque Terre

18.74 K

Cinque Terre

0

ಸಂಬಂಧಿತ ಸುದ್ದಿ