ಕುಂದಗೋಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಗ್ರಾಮದ ಒಗ್ಗಟ್ಟು ಪ್ರದರ್ಶಿಸಲು ಇರುತ್ತವೆ. ಗ್ರಾಮದ ಜನರು ಒಟ್ಟಾಗಿ ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಈ ಚುನಾವಣೆಯಲ್ಲಿ ಮಹಿಳೆಯರಿಗೂ ಮೀಸಲಾತಿ ಇರುತ್ತದೆ ಅವರಿಗೂ ಆಧ್ಯತೆ ಕೊಡಿ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯಿತಿಯ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದರು.
ಮಾಜಿ ಶಾಸಕ ಎಮ್.ಎಸ್.ಅಕ್ಕಿ ಹಾಗೂ ಜಗದೀಶ್ ಉಪ್ಪಿನ್, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುತ್ತಣ್ಣ ಶಿವಳ್ಳಿ, ಕಿಸಾನ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಗಂಗಾಧರ ಪಾಣಿಗಟ್ಟಿ, ಕಾಂಗ್ರೆಸ್ ಮುಖಂಡ ಜಗದೀಶ್ ಉಪ್ಪಿನ್ ಮಾತನಾಡಿ ಗ್ರಾಮ ಪಂಚಾಯಿತಿ ಸರ್ವತೋಮುಖ ಅಭಿವೃದ್ಧಿ ಶ್ರಮಿಸಿ ಒಗ್ಗಟ್ಟನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಅಭಿಪ್ರಾಯ ಹಂಚಿಕೊಂಡರು.
ಕುಂದಗೋಳ ತಾಲೂಕಿನ ವಿವಿಧ ಬ್ಲಾಕ್ ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
09/12/2020 09:55 pm