ಧಾರವಾಡ: ಭೂ ಸುಧಾರಣಾ ತಿದ್ದಪುಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಇದೀಗ ಹಳ್ಳಿ ಹಳ್ಳಿಗೂ ಕಾಲಿಟ್ಟಿದೆ.
ಧಾರವಾಡ ತಾಲೂಕಿನ ಮನಸೂರು, ಬೆಳ್ಳಿಗಟ್ಟಿ, ನರೇಂದ್ರ ಸೇರಿದಂತೆ ಇತರ ಗ್ರಾಮಗಳಲ್ಲಿ ಆರ್ ಕೆಎಸ್ ಸಂಘಟನೆ ಹಾಗೂ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ಸರ್ಕಾರಗಳು ಜಾರಿಗೆ ತರಲು ಹೊರಟಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗುವುದರಲ್ಲಿ ಸಂದೇಹವಿಲ್ಲ. ಆದ್ದರಿಂದ ಸರ್ಕಾರಗಳು ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Kshetra Samachara
10/12/2020 08:28 pm