ಹುಬ್ಬಳ್ಳಿ: ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ.
ಅಲ್ಲದೆ ಈ ಬಗ್ಗೆ ಸುದ್ದಿಗಳು ಹರಿದಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು,ಕೋವಿಡ್ ನಿಂದ ಅಗಲಿದ ಕೇಂದ್ರದ ಸಚಿವರಾಗಿದ್ದ ಸುರೇಶ ಅಂಗಡಿ ಅವರಿಂದ ತೆರವಾಗಿರುವ ಬೆಳಗಾವಿ ಕ್ಷೇತ್ರದ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ.
ಅಲ್ಲದೇ ಯಾರನ್ನು ಕಣಕ್ಕಿಳಿಸಬೇಕು ಎಂಬ ನಿರ್ಧಾರವನ್ನು ಪಕ್ಷದ ಮುಖಂಡರು ತೆಗೆದುಕೊಳ್ಳುತ್ತಾರೆ ಎಂದರು.
ನಾನು ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ ಅಲ್ಲದೇ ನನ್ನ ರಾಜಕೀಯ ಜೀವನವನ್ನು ಇಲ್ಲಿಂದಲ್ಲೆ ಪ್ರಾರಂಭಿಸಿದ್ದು,ಸುಮಾರು ವರ್ಷ ಧಾರವಾಡ ಜಿಲ್ಲೆಯಲ್ಲಿ ಸಾಗಿ ಬಂದಿದ್ದೇನೆ ಈ ನಿಟ್ಟಿನಲ್ಲಿ ನಾನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಮೇಯವೇ ಇಲ್ಲ ಎಂದರು.
ಈಗಾಗಲೇ ಬಹುತೇಕ ಮಾಧ್ಯಮಗಳಲ್ಲಿ ಜಗದೀಶ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂಬುವಂತ ಮಾತುಗಳು ಸತ್ಯಕ್ಕೆ ದೂರವಾಗಿದೆ ಎಂದು ಅವರು ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
Kshetra Samachara
11/12/2020 12:36 pm