ಹುಬ್ಬಳ್ಳಿ: ಭೂಸುಧಾರಣೆ ತಿದ್ದುಪಡಿ ಕಾಯ್ದೆ ಅಂಗೀಕಾರ ಖಂಡಿಸಿ ಹುಬ್ಬಳ್ಳಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸರ್ಕಾರ ರೈತರ ಧ್ವನಿಗೆ ಕಿವಿಗೊಡದೇ ಬಿಲ್ ಪಾಸ್ ಮಾಡಿದೆ ಎಂದು ಆಕ್ರೋಶ ಹೊರಹಾಕಿದರು. ರಾಜ್ಯ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಬಿಲ್ ಪಾಸ್ ಮಾಡಿರುವುದು ಖಂಡನೀಯ ಕೂಡಲೇ ಈ ಬಿಲ್ ವಾಪಸ್ ಪಡಿಬೇಕು ಎಂದು ಆಗ್ರಹಿಸಿ ತಹಶಿಲ್ದಾರರ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
11/12/2020 01:32 pm