ಧಾರವಾಡ: ಜಿಲ್ಲೆಯಲ್ಲಿ ಎರಡನೇಯ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಇಂದು(ಡಿ.12) ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ಮತ್ತು ನವಲಗುಂದ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯತಗಳಿಗೆ ಒಟ್ಟು 269 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 89, ಕುಂದಗೋಳ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ 93, ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಾಯತಗಳಿಗೆ 42 ಮತ್ತು ನವಲಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 45 ನಾಮಪತ್ರಗಳು ಸೇರಿದಂತೆ ಒಟ್ಟು 269 ನಾಮಪತ್ರಗಳು ಇಂದು ಸಲ್ಲಿಕೆ ಆಗಿವೆ ಎಂದು ಅವರು ತಿಳಿಸಿದ್ದಾರೆ.
Kshetra Samachara
12/12/2020 09:01 pm