ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಧಾರವಾಡ, ಕಲಘಟಗಿ ಮತ್ತು ಅಳ್ನಾವರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ 22ರಂದು ಜರಗುವ ಸಾರ್ವತ್ರಿಕ ಚುನಾವಣೆಗಾಗಿ ಅಭ್ಯರ್ಥಿಗಳು ಸಲ್ಲಿಸಿದ್ದ 3,209 ನಾಮಪತ್ರಗಳನ್ನು ಡಿಸೆಂಬರ್ 12 ರಂದು ಪರಿಶೀಲಿಸಲಾಗಿದೆ. ಅದರಲ್ಲಿ 116 ನಾಮಪತ್ರಗಳು ತಿರಸ್ಕೃತಗೊಂಡಿವೆ ಮತ್ತು ಪರಿಶೀಲನೆ ನಂತರ ಉಳಿದ ಒಟ್ಟು 3,093 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನ 34 ಗ್ರಾಮ ಪಂಚಾಯತಿಗಳಿಗೆ ಒಟ್ಟು 1,871 ನಾಮಪತ್ರಗಳು ಸಲ್ಲಿಕೆಯಾಗಿದ್ದು ಇವುಗಳಲ್ಲಿ 1,802 ನಾಮಪತ್ರಗಳು ಕ್ರಮಬದ್ಧವಾಗಿವೆ. ಕಲಘಟಗಿ ತಾಲೂಕಿನ 27 ಗ್ರಾಮ ಪಂಚಾಯತಿಗಳಿಗೆ ಒಟ್ಟು 1,158 ನಾಮಪತ್ರಗಳು ಸಲ್ಲಿಕೆಯಾಗಿದ್ದು ಇವುಗಳಲ್ಲಿ 1,115 ನಾಮಪತ್ರಗಳು ಕ್ರಮಬದ್ಧವಾಗಿವೆ. ಅಳ್ನಾವರ ತಾಲೂಕಿನ 4 ಗ್ರಾಮ ಪಂಚಾಯತಿಗಳಿಗೆ ಒಟ್ಟು 180 ನಾಮಪತ್ರಗಳು ಸಲ್ಲಿಕೆಯಾಗಿದ್ದು ಇವುಗಳಲ್ಲಿ 176 ನಾಮಪತ್ರಗಳು ಕ್ರಮಬದ್ಧವಾಗಿವೆ.
ಧಾರವಾಡ, ಕಲಘಟಗಿ ಮತ್ತು ಅಳ್ನಾವರ ತಾಲೂಕಿನ 65 ಗ್ರಾಮ ಪಂಚಾಯತಿಗಳಿಗೆ ಒಟ್ಟು 3,209 ನಾಮಪತ್ರಗಳು ಸಲ್ಲಿಕೆಯಾಗಿದ್ದು, ನಾಮಪತ್ರ ಪರಿಶೀಲನೆ ನಂತರ ಕ್ರಮಬದ್ಧವಾಗಿರುವ 3,093 ಅಭ್ಯರ್ಥಿಗಳು ನಾಮನಿರ್ದೇಶಿತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Kshetra Samachara
13/12/2020 09:14 pm