ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮೂರು ತಿಂಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ

ಧಾರವಾಡ: ಸಾರಿಗೆ ಸಂಸ್ಥೆ ನೌಕರರ ಹೋರಾಟ ಕೊನೆಗೂ ಅಂತ್ಯವಾಗಿದ್ದು, ಇಂದು ಮಧ್ಯಾಹ್ನದಿಂದ ಮತ್ತೆ ಬಸ್ಸುಗಳು ರಸ್ತೆಗಿಳಿದು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬಿಆರ್ ಟಿಎಸ್ ಸಂಸ್ಥೆಯ ಚಿಗರಿ ಬಸ್ಸುಗಳು ಕೂಡ ಕಾರ್ಯಾರಂಭ ಮಾಡಿದ್ದು, ಜಿಲ್ಲಾ ಕೇಂದ್ರದಿಂದ ವಿವಿಧ ಹಳ್ಳಿಗಳಿಗೆ ಹೋಗುವ ಬಸ್ಸುಗಳು ಸಹಿತ ಕಾರ್ಯಾರಂಭ ಮಾಡಿವೆ.

ಈಗಾಗಲೇ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ನೌಕರರೊಂದಿಗೆ ಚರ್ಚೆ ಮಾಡಿ ಮೂರು ತಿಂಗಳ ಒಳಗಾಗಿ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ರೂಪದಲ್ಲಿ ನೀಡಿದ್ದು, ಅವುಗಳನ್ನು ಈಡೇರಿಸದೇ ಇದ್ದಲ್ಲಿ ಮತ್ತೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸಾರಿಗೆ ಸಂಸ್ಥೆ ನೌಕರರ ಮಹಾಮಂಡಳದ ಧಾರವಾಡದ ಪ್ರಧಾನ ಕಾರ್ಯದರ್ಶಿ ವೈ.ಎಸ್.ಹುಳ್ಳಿ ತಿಳಿಸಿದರು.

ಇಂದು ಮಧ್ಯಾಹ್ನದಿಂದಲೇ ಸಾರಿಗೆ ಸಂಸ್ಥೆ ಬಸ್ಸುಗಳು ಕಾರ್ಯಾರಂಭ ಮಾಡಿದ್ದು, ನಾಲ್ಕೈದು ದಿನಗಳಿಂದ ಪ್ರಯಾಣಿಕರು ಅನುಭವಿಸಿದ ತೊಂದರೆಗೆ ನೌಕರರು ಸಹ ಕ್ಷಮೆ ಕೂಡ ಯಾಚಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

14/12/2020 07:52 pm

Cinque Terre

36.17 K

Cinque Terre

2

ಸಂಬಂಧಿತ ಸುದ್ದಿ