ಧಾರವಾಡ: ಜಿಲ್ಲೆಯಲ್ಲಿ ಎರಡನೇ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಇಂದು(ಡಿ.14) ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ಮತ್ತು ನವಲಗುಂದ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯತಗಳಿಗೆ ಒಟ್ಟು 155 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 52, ಕುಂದಗೋಳ ತಾಲೂಕಿನ ಗ್ರಾಮ ಪಂಚಯತಿಗಳಿಗೆ 70, ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಾಯತಗಳಿಗೆ 16 ಮತ್ತು ನವಲಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 17 ನಾಮಪತ್ರಗಳು ಸೇರಿದಂತೆ ಒಟ್ಟು 155 ನಾಮಪತ್ರಗಳು ಇಂದು ಸಲ್ಲಿಕೆ ಆಗಿವೆ ಎಂದು ಅವರು ತಿಳಿಸಿದ್ದಾರೆ.
Kshetra Samachara
14/12/2020 08:45 pm