ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕು ನೂಲ್ವಿ ಗ್ರಾಮ ಪಂಚಾಯಿತಿ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಹೆಚ್.ರಾಠೋಡ್ ನಿಧನರಾಗಿದ್ದಾರೆ.
ಆನಂದನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಹೆಚ್.ರಾಠೋಡ್ ಅವರನ್ನು ನೂಲ್ವಿ ಗ್ರಾ.ಪಂ. ಸಹಾಯಕ ಚುನಾವಣೆ ಅಧಿಕಾರಿಯಾಗಿ ನೇಮಿಸಲಾಗಿತ್ತು. ಇಂದು ಬೆಳಿಗ್ಗೆ 10 ಗಂಟೆಗೆ ಚುನಾವಣೆ ಕರ್ತವ್ಯಕ್ಕೆ ತೆರಳುವ ವೇಳೆ ಉಣಕಲ್ ಬಸ್ ನಿಲ್ದಾಣದ ಸಮೀಪ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದರು. ನಂತರ ಕಿಮ್ಸ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿಯೇ ಅಸುನೀಗಿದ್ದಾರೆ. ನೂಲ್ವಿ ಗ್ರಾ.ಪಂ.ಚುನಾವಣೆ ಅಧಿಕಾರಿ ಉಪನ್ಯಾಸಕ ಅಶೋಕ ಎಸ್.ಗಡಾದ ಈ ಕುರಿತು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದಾರೆ.
ಗ್ರಾಮೀಣ ತಹಶೀಲ್ದಾರ್ ಪ್ರಕಾಶ್ ನಾಶಿ ಹಾಗೂ ನಗರ ತಹಶೀಲ್ದಾರ್ ಶಶಿಧರ ಮಾಡ್ಯಳ ಅವರು ಕಿಮ್ಸ್ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಚುನಾವಣೆ ತುರ್ತು ಕಾರ್ಯದ ನಿಮಿತ್ತ ದೈಹಿಕ ಶಿಕ್ಷಕ ರಾಜೇಸಾಬ್ ನದಾಫ್ ಅವರನ್ನು ಸಹಾಯಕ ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ.
Kshetra Samachara
15/12/2020 03:36 pm