ಧಾರವಾಡ: ಜಿಲ್ಲೆಯಲ್ಲಿ ಎರಡನೇಯ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಇಂದು ಹುಬ್ಬಳ್ಳಿ, ಕುಂದಗೋಳ, ಅಣ್ಣಿಗೇರಿ ಮತ್ತು ನವಲಗುಂದ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯತಿಗಳಿಗೆ ಒಟ್ಟು 1733 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ 607, ಕುಂದಗೋಳ ತಾಲೂಕಿನ ಗ್ರಾಮ ಪಂಚಯತಿಗಳಿಗೆ 659 , ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಾಯತಗಳಿಗೆ 179 ಮತ್ತು ನವಲಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ 288 ನಾಮಪತ್ರಗಳು ಸೇರಿದಂತೆ ಒಟ್ಟು 1733 ನಾಮಪತ್ರಗಳು ಇಂದು ಸಲ್ಲಿಕೆ ಆಗಿವೆ ಎಂದು ಅವರು ತಿಳಿಸಿದ್ದಾರೆ.
Kshetra Samachara
15/12/2020 10:45 pm