ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎರಡನೇ ಹಂತದ ಗ್ರಾ.ಪಂ ಚುನಾವಣೆ- ಒಟ್ಟು 3,780 ನಾಮಪತ್ರ ಸಲ್ಲಿಕೆ

ಧಾರವಾಡ: ಜಿಲ್ಲೆಯಲ್ಲಿ ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನವಾಗಿತ್ತು. ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ ಮತ್ತು ನವಲಗುಂದ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯತಿಗಳಿಗೆ ಒಟ್ಟು 3,780 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ‌ ನಿತೇಶ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಮಪತ್ರ ಸಲ್ಲಿಕೆ ಕೊನೆಯ ದಿನವಾದ ಡಿಸೆಂಬರ್ 16ರಂದು ಹುಬ್ಬಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 629, ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಯತಿಗಳಿಗೆ 125, ಕುಂದಗೋಳ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ 463 ಮತ್ತು ನವಲಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ 347 ಸೇರಿದಂತೆ ಒಟ್ಟು 1564 ನಾಮಪತ್ರಗಳು ಸಲ್ಲಿಕೆ ಆಗಿವೆ ಎಂದು ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಡಿಸೆಂಬರ್‌ 11 ರಿಂದ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದಿನ ( ಡಿಸೆಂಬರ್ 16) ವರೆಗೆ ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ ಮತ್ತು ನವಲಗುಂದ ತಾಲೂಕಿನ ವಿವಿಧ ಹ್ರಾಮ ಪಂಚಾಯತಿಗಳಿಗೆ ಒಟ್ಟು 3780 ಅಭ್ಯರ್ಥಿಗಳು ತಮ್ಮ ನಾಮಪತ್ರಗಳ ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

17/12/2020 10:20 am

Cinque Terre

28.38 K

Cinque Terre

0

ಸಂಬಂಧಿತ ಸುದ್ದಿ