ನವಲಗುಂದ : ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನ ನೀಡಿ ಆದೇಶ ಹೊರಡಿಸಲಾಗಿದ್ದು, ಇದರಿಂದ ಮುನೇನಕೊಪ್ಪ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.
ಸರಕಾರದ ವಿವಿಧ ಇಲಾಖೆಗಳ ಅಧೀನದ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿದ್ದ ಮುನೇನಕೊಪ್ಪ ಅವರಿಗೆ ಕೆಲವು ತಿಂಗಳ ಹಿಂದೆ ನಿಗಮಕ್ಕೆ ಆಯ್ಕೆ ಮಾಡಿದ್ದ ರಾಜ್ಯ ಸರಕಾರ, ಈಗ ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಬೆಂಗಳೂರು ಇದರ ಅಧ್ಯಕ್ಷರಾಗಿರುವ ಶಂಕರ ಪಾಟೀಲಮುನೇನಕೊಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ಸಿಕ್ಕಿದ್ದು, ನವಲಗುಂದದಲ್ಲಿ ಅವರ ಅಭಿಮಾನಿಗಳ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.
Kshetra Samachara
17/12/2020 07:24 pm