ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗ್ರಾ.ಪಂ ಎರಡನೇ ಹಂತದ ಚುನಾವಣೆ- 68 ಸ್ಥಾನಕ್ಕೆ ಅವಿರೋಧ ಆಯ್ಕೆ, ಕಣದಲ್ಲಿ ಉಳಿದ 2981 ಅಭ್ಯರ್ಥಿಗಳು

ಧಾರವಾಡ: ಜಿಲ್ಲೆಯಲ್ಲಿ ಡಿಸೆಂಬರ್ 27 ರಂದು ಎರಡನೇ ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಜರುಗುವ ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ ಮತ್ತು ನವಲಗುಂದ ತಾಲೂಕುಗಳಲ್ಲಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಉಮೇದುವಾರಿಕೆ ಸಲ್ಲಿಸಿದ್ದ ಅಭ್ಯರ್ಥಿಗಳ ಪೈಕಿ 68 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅಂತಿಮವಾಗಿ 2,981 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ ಮತ್ತು ನವಲಗುಂದ ತಾಲೂಕಿನ ಒಟ್ಟು ಕ್ರಮಬದ್ಧ 3,543 ನಾಮಪತ್ರಗಳ ಪೈಕಿ 68 ಜನ ಅವಿರೋಧ ಆಯ್ಕೆಯಾಗಿದ್ದಾರೆ. ಮತ್ತು 483 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಅಂತಿಮವಾಗಿ ಚುನಾವಣಾ ಕ್ಷೇತ್ರಗಳಲ್ಲಿ 2,981 ಜನ ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಉಳಿದಿದ್ದಾರೆ.

ನಾಲ್ಕು ತಾಲೂಕಿನ ಒಟ್ಟು 71 ಗ್ರಾಮ ಪಂಚಾಯತಿಗಳ 347 ಕ್ಷೇತ್ರಗಳಲ್ಲಿನ ಖಾಲಿ ಇರುವ 991 ಸ್ಥಾನಗಳಿಗೆ ಚುನಾವಣೆ ಜರುಗಲಿದೆ.

ಹುಬ್ಬಳ್ಳಿ ತಾಲೂಕಿನ 1,274 ಕ್ರಮಬದ್ಧ ನಾಮಪತ್ರಗಳ ಪೈಕಿ 24 ಜನ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 215 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಒಟ್ಟು 1036 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಕಿರೇಸೂರ ಗ್ರಾಮದ ವಾರ್ಡ್ 3 ರಲ್ಲಿ ಮೀಸಲಿದ್ದ ಅನಸೂಚಿತ ಪಂಗಡ ಮಹಿಳಾ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವದಿಲ್ಲ.

ಅಣ್ಣಿಗೇರಿ ತಾಲೂಕಿನ 365 ಕ್ರಮಬದ್ಧ ನಾಮಪತ್ರಗಳ ಪೈಕಿ 4 ಜನ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 43 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಒಟ್ಟು 318 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ನವಲಗುಂದ ತಾಲೂಕಿನ 708 ಕ್ರಮಬದ್ಧ ನಾಮಪತ್ರಗಳ ಪೈಕಿ 19 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 139 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಒಟ್ಟು 538 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಕುಂದಗೋಳ ತಾಲೂಕಿನ 1,196 ಕ್ರಮಬದ್ಧ ನಾಮಪತ್ರಗಳ ಪೈಕಿ 21 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 86 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಒಟ್ಟು 1,089 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಅಂತಿಮ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳಿಗೆ ರಾಜ್ಯ ಚುನಾವಣಾ ಆಯೋಗವು ಸೂಚಿಸಿರುವ ನಿಯಮಗಳನುಸಾರ ಈಗಾಗಲೇ ಚುನಾವಣಾ ಚಿಹ್ನೆಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

20/12/2020 08:42 pm

Cinque Terre

55.78 K

Cinque Terre

0

ಸಂಬಂಧಿತ ಸುದ್ದಿ