ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಂತಿಯುತವಾಗಿ ನಡೆದ ಒಂದನೇ ಹಂತದ ಚುನಾವಣೆ

ಧಾರವಾಡ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗಳು ಧಾರವಾಡ, ಕಲಘಟಗಿ ಮತ್ತು ಅಳ್ನಾವರ ತಾಲೂಕಿನ ಎಲ್ಲ 412 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ.

ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆದಿದ್ದು, 1,724 ಚುನಾವಣಾ ಸಿಬ್ಬಂದಿ ಮತಗಟ್ಟೆಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಧಾರವಾಡ ತಾಲೂಕಿನಲ್ಲಿ 952, ಕಲಘಟಗಿ ತಾಲೂಕಿನಲ್ಲಿ 688 ಮತ್ತು ಅಳ್ನಾವರ ತಾಲೂಕಿನಲ್ಲಿ 84 ಜನ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 1,724 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ. ತುರ್ತು ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ಸುಮಾರು 158 ಸಿಬ್ಬಂದಿಗಳು ಹೆಚ್ಚುವರಿಯಾಗಿ ಸಿದ್ಧಗೊಳಿಸಲಾಗಿತ್ತು.

ಸಂಜೆ 5 ಗಂಟೆಯ ನಂತರ ಮತದಾನ ಮುಕ್ತಾಯವಾದ ಮೇಲೆ ಧಾರವಾಡ ತಾಲೂಕಿನ ಎಲ್ಲ ಮತಗಟ್ಟೆಗಳಿಂದ ಮತಪೆಟ್ಟಿಗೆಗಳನ್ನು ಧಾರವಾಡ ನಗರದ ಬಾಸೆಲ್ ಮಿಷನ್ ಆಂಗ್ಲ ಮಾಧ್ಯಮ ಶಾಲೆಗೆ ಮತ್ತು ಕಲಘಟಗಿ ತಾಲೂಕಿನ ಎಲ್ಲ ಮತಗಟ್ಟೆಗಳಿಂದ ಮತಪೆಟ್ಟಿಗೆಗಳನ್ನು ಕಲಘಟಗಿ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಗೆ ಹಾಗೂ ಅಳ್ನಾವರ ತಾಲೂಕಿನ ಎಲ್ಲ ಮತಗಟ್ಟೆಗಳಿಂದ ಮತಪೆಟ್ಟಿಗೆಗಳನ್ನು ಅಳ್ನಾವರ ಪಟ್ಟಣದ ಸೇಂಟ್ ಥೆರೆಸಾ ಪ್ರೌಢಶಾಲೆಗೆ ತೆಗೆದುಕೊಂಡು ಬಂದು, ಡಿಮಾಸ್ಟರಿಂಗ್ ಮಾಡಿ ಎಲ್ಲ ಮತಪೆಟ್ಟಿಗೆಗಳನ್ನು ಭದ್ರವಾಗಿ ಇಡಲಾಗಿದೆ.

ಡಿಸೆಂಬರ್ 30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.

Edited By : Nagaraj Tulugeri
Kshetra Samachara

Kshetra Samachara

22/12/2020 08:39 pm

Cinque Terre

18.29 K

Cinque Terre

1

ಸಂಬಂಧಿತ ಸುದ್ದಿ