ಹುಬ್ಬಳ್ಳಿ: ಮಾಜಿ ಪ್ರಧಾನಿ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಇದೇ ಡಿ.25 ರಂದು ಸುಶಾಸನ ದಿನ ಆಚರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸುವುದು
ಹಾಗೂ ದೇಶದ ರಾಷ್ಟ್ರೀಯ ರೈತ ದಿನಾಚರಣೆ ಹಿನ್ನೆಲೆಯಲ್ಲಿ ಫಸಲ ಭೀಮಾ ಯೋಜನೆ ದೇಶದ 09ಕೋಟಿ 18 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,ದೇಶದ ರಾಜಕೀಯ ಇತಿಹಾಸದಲ್ಲಿಯೇ ಸಾಕಷ್ಟು ಜನಮನ್ನಣೆ ಪಡೆದ
ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಉತ್ತಮ ಸರ್ಕಾರ,ಉತ್ತಮ ಆಡಳಿತ ಎಂಬುವ ಸದುದ್ದೇಶದಿಂದ ಸುಶಾಸನ ದಿನವನ್ನು ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಪೂರಕವಾದ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿದೆ.
ಅಲ್ಲದೇ ಸಾಕಷ್ಟು ಜನಪರ ಕಾಳಜಿಯನ್ನು ಹೊಂದಿರುವ ಬಿಜೆಪಿ ಸರ್ಕಾರ ತನ್ನ ಆಡಳಿತ ಅವಧಿಯಲ್ಲಿ ಸಾಕಷ್ಟು ಯೋಜನೆಯನ್ನು ರೈತರಿಗಾಗಿ ತಂದಿದೆ ಎಂದರು.
ಎಪಿಎಂಸಿ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡದ ಅವರು,ಯಾವುದೇ ಕಾರಣಕ್ಕೂ ಎಪಿಎಂಸಿ ಬಂದ್ ಆಗುವುದಿಲ್ಲ.ರೈತರ ಹಿತವನ್ನು ಕಾಯುವ ಬಗ್ಗೆ ಬಿಜೆಪಿ ಹೊಸ ಹೊಸ ಯೋಜನೆ ರೂಪಿಸುತ್ತಿದೆ ಎಂದರು.
Kshetra Samachara
23/12/2020 01:48 pm