ಹುಬ್ಬಳ್ಳಿ- ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಾಗಿದೆ. ವಿವಿಧ ಕೈಗಾರಿಕೋದ್ಯಮಿಗಳು ಅವಳಿ ನಗರದಲ್ಲಿ14 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿದ್ದಾರೆ.
ಈ ಹೂಡಿಕೆಗೆ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ವಾರ್ಡ ನಂ .40 ರ ಬಸವನಗರ, ಸಹಸ್ರಾರ್ಜುನಗರ, ಕೋಟಿಲಿಂಗನಗರ, ನಾಗಲಿಂಗನ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಹುಬ್ಬಳ್ಳಿ ಧಾರವಾಡ ನಗರದಲ್ಲಿ ಸ್ಮಾರ್ಟ್ ಸಿಟಿ, ಮಹಾತ್ಮಾ ಗಾಂಧಿ ನಗರ ವಿಕಾಸ, ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ.
ಸಹಸ್ರಾರ್ಜುನ ನಗರದಲ್ಲಿ 20. ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ, ನಿರ್ಮಿಸಲಾಗುವುದು. 11.30 ಲಕ್ಷ ವೆಚ್ಚದಲ್ಲಿ ನಾಗಲಿಂಗನರ ಹಾಗೂ ಬಸವನಗರದ ಉದ್ಯಾನವನಗಳ ಅಭಿವೃದ್ಧಿ ಚಾಲನೆ ನೀಡಲಾಗಿದೆ.
15 ನೇ ಹಣಕಾಸು ಯೋಜನೆಯ 37 ಲಕ್ಷ ವೆಚ್ಚದಲ್ಲಿ ಬಸವನಗರ, ಕೋಟಿಲಿಂಗನಗರ, ಪಾವಸ್ಕರ ಲೇಔಟ್ ನಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಭೂವಿಜ್ಞಾನ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು.
ವೆಂಕಟೇಶ್ ಕಾಲೋನಿ, ಬಸವನಗರದ ನಿವಾಸಿಗಳು ರಸ್ತೆ ನಿರ್ಮಾಣಕ್ಕಾಗಿ ಸಚಿವರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಮಲ್ಲಿಕಾರ್ಜುನ ಸವಕಾರ, ಸಂತೋಷ್ ಚವ್ಹಾಣ್, ಮುಕುಂದ ಗುಗ್ಗರಿ ಉಪಸ್ಥಿತರಿದ್ದರು.
Kshetra Samachara
25/12/2020 08:37 pm