ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆಸ್ತಿ ಕರ ಹೆಚ್ಚಳಕ್ಕೆ ತಾರಾದೇವಿ ವಿರೋಧ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಶೇ. 300 ರಿಂದ 700 ರಷ್ಟು ಹೆಚ್ಚಳ ಕ್ರಮವನ್ನು ಕಾಂಗ್ರೆಸ್ ಪಕ್ಷದ ಮಹಿಳಾ ಪ್ರಧಾನ ಕಾರ್ಯದರ್ಶಿ ತಾರಾದೇವಿ ವಾಲಿ ವಿರೋಧಿಸಿದ್ದಾರೆ.

ರಾಜ್ಯ ಸರ್ಕಾರ ಈ ದರ ಹೆಚ್ಚಳವನ್ನು ಪುನರ್‌ ಪರಿಶೀಲಿಸಬೇಕಿದೆ. ಈ ಹೆಚ್ಚಳ ಸೂಕ್ತವೆಲ್ಲ ಅಂತಲೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಸ್ತಿ ತೆರಿಗೆ ಏರಿಕೆಯಿಂದ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ತುಂಬಾ ತೊಂದರೆಯಾಗುತ್ತದೆ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಈ ಭಾಗದ ಜನಪ್ರತಿನಿಧಿಗಳು ತಕ್ಷಣ ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ಗಮನ ಹರಿಸಿ, ಆಸ್ತಿ ತೆರಿಗೆ ಕಡಿಮೆ ಮಾಡಲು ಮುಂದಾಗಬೇಕಿದೆ ಎಂದು ತಾರಾದೇವಿ ವಾಲಿ ಒತ್ತಾಯಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

23/02/2022 08:37 pm

Cinque Terre

54.84 K

Cinque Terre

8

ಸಂಬಂಧಿತ ಸುದ್ದಿ