ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೋವಿಡ್‌ನಿಂದ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನೀಡಿದ ಶಾಸಕ ನಿಂಬಣ್ಣವರ

ಧಾರವಾಡ: ಕೊರೊನಾ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ ಬಿಪಿಎಲ್ ಕಾರ್ಡುದಾರರ ಕುಟುಂಬಕ್ಕೆ ಕಲಘಟಗಿ ಕ್ಷೇತ್ರದ ಶಾಸಕ ಸಿ.ಎಂ.ನಿಂಬಣ್ಣವರ ಅವರು, ಪರಿಹಾರ ಚೆಕ್ ಹಸ್ತಾಂತರಿಸಿದರು.

ಧಾರವಾಡದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಲಘಟಗಿ ಕ್ಷೇತ್ರಕ್ಕೆ ಒಳಪಡುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ವಿವಿಧ ಹಳ್ಳಿಗಳ ಫಲಾನುಭವಿಗಳಿಗೆ ಪರಿಹಾರದ ಚೆಕ್ ಹಸ್ತಾಂತರಿಸಿದರು. ಸದ್ಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ 50 ಸಾವಿರ ರೂಪಾಯಿ ಪರಿಹಾರ ಜಮೆ ಆಗಿದ್ದು, ಬಾಕಿ 1 ಲಕ್ಷ ರೂಪಾಯಿ ಪರಿಹಾರ ಚೆಕ್‌ನ್ನು ಶಾಸಕ ನಿಂಬಣ್ಣವರ ಅವರು ನೇರವಾಗಿ ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಕಲಘಟಗಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಕೋವಿಡ್‌ನಿಂದ ಅನೇಕರು ಅಸುನೀಗಿದ್ದು, ಬಿಪಿಎಲ್ ಕಾರ್ಡು ಹೊಂದಿದ ಫಲಾನುಭವಿಗಳಿಗೆ ಹಂತ ಹಂತವಾಗಿ ಪರಿಹಾರ ಬರಲಿದೆ. ಕುಟುಂಬಸ್ಥರು ತಮ್ಮ ಕುಟುಂಬ ನಿರ್ವಹಣೆಗಾಗಿ ಹಣವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

18/12/2021 06:54 pm

Cinque Terre

41.59 K

Cinque Terre

4

ಸಂಬಂಧಿತ ಸುದ್ದಿ