ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಮಾಜಿ ಶಾಸಕ ಕೋನರಡ್ಡಿ ನೇತೃತ್ವದಲ್ಲಿ ಅಪ್ಪುಗೆ ನಮನ

ನವಲಗುಂದ: ಸ್ಯಾಂಡಲ್​ವುಡ್ ನಟ ಪುನೀತ್ ರಾಜ್‌ಕುಮಾರ್ ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ಈ ಹಿನ್ನೆಲೆ ಪಟ್ಟಣದಲ್ಲಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಅವರ ನೇತೃತ್ವದಲ್ಲಿ ಅಪ್ಪು ಅವರಿಗೆ ಭಾವಪೂರ್ವ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.

ಡಾ.ರಾಜ್‌ಕುಮಾರ ಅವರ ಕುಟುಂಬ ಚಿತ್ರರಂಗಕ್ಕೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದು, ಅವರ ಕುಟುಂಬದ ಮತ್ತೊಂದು ಕುಡಿ ಚಿತ್ರರಂಗದ ಮೇರು ನಟ, ಸ್ನೇಹ ಜೀವಿ ಇದಷ್ಟೇ ಅಲ್ಲದೇ ಸಾಮಾಜಿಕ ಜೀವನದಲ್ಲೂ ಸಾಕಷ್ಟು ಹೆಸರು ಮಾಡಿದ ಕರುನಾಡಿನ ಅಚ್ಚುಮೆಚ್ಚಿನ ಚಿತ್ರನಟ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನ ನಾಡಿನ ಎಲ್ಲ ಅಭಿಮಾನಿಗಳಿಗೆ, ಅವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

Edited By : PublicNext Desk
Kshetra Samachara

Kshetra Samachara

30/10/2021 08:45 am

Cinque Terre

13.3 K

Cinque Terre

0

ಸಂಬಂಧಿತ ಸುದ್ದಿ