ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ʼದಿ ಕಾಶ್ಮೀರ್ ಫೈಲ್ಸ್‌ʼ ದೇಶದ ಎಲ್ಲಾ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿ; ಸಚಿವ ಮುನೇನಕೊಪ್ಪ

ಹುಬ್ಬಳ್ಳಿ: ʼದಿ ಕಾಶ್ಮೀರ್ ಫೈಲ್ಸ್‌ʼ ಚಿತ್ರ ದೇಶದ ಎಲ್ಲಾ ಭಾಷೆಗಳಲ್ಲಿಯೂ ಬಿಡುಗಡೆಯಾಗಬೇಕು. ಈ ಮೂಲಕ ದೇಶದ ಜನರಿಗೆ ಅವರವರ ಭಾಷೆಯಲ್ಲಿ ಇತಿಹಾಸ ತಿಳಿಯಲಿದೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವ ನಿಲುವು ತೆಗೆದುಕೊಳ್ಳುತ್ತದೆ ಅದಕ್ಕೆ ನಾನೊಬ್ಬ ಮಂತ್ರಿಯಾಗಿ ಬದ್ಧನಿದ್ದೇನೆ. ಈಗಾಗಲೇ ಸಿಎಂ ಮತ್ತು ಶಿಕ್ಷಣ ಸಚಿವರು ಈ ಬಗ್ಗೆ ಚರ್ಚಿಸಿದ್ದಾರೆ ಎಂದರು.

ಕಾಂಗ್ರೆಸ್ ನವರು ಚುನಾವಣೆ ದೃಷ್ಟಿಯಿಂದ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಯಾವಾಗಲೂ ಅವರದ್ದು ಓಟ್ ಬ್ಯಾಂಕ್ ರಾಜಕೀಯ.‌ ಪಂಚರಾಜ್ಯ ಚುನಾವಣೆಯಲ್ಲಿ ಇಡೀ ದೇಶದ ಜನರೇ ಅವರಿಗೆ ಪಾಠ ಕಲಿಸಿ, ತಿರಸ್ಕರಿಸಿದ್ದಾರೆ. ಇನ್ನಾದರೂ ಅವರು ಬುದ್ಧಿ ಕಲಿಯಲಿ. ಬಿಜೆಪಿಯವರ ಅಭಿವೃದ್ಧಿ ಕೆಲಸಗಳನ್ನು ಕಾಂಗ್ರೆಸ್ ನವರಿಗೆ ಸಹಿಸಲು ಆಗದೇ ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಹಾಯ್ದರು.

ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿಷಯವನ್ನು ರಾಷ್ಟ್ರಮಟ್ಟದಲ್ಲಿ ಹಬ್ಬಿಸುವ ಅವಶ್ಯಕತೆ ಇರಲಿಲ್ಲ. ಕೋರ್ಟ್ ನೀಡಿದ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯ ಬಂದ್ ಗೆ ಕರೆ ಕೊಟ್ಟಾಗ ಕಾಂಗ್ರೆಸ್ ಬೆಂಬಲಿಸಿದೆ. ಕಾಂಗ್ರೆಸ್ ನಡೆ ಸರಿಯಲ್ಲ ಎಂದು ಕಿಡಿಕಾರಿದರು.

Edited By :
Kshetra Samachara

Kshetra Samachara

19/03/2022 02:00 pm

Cinque Terre

29.8 K

Cinque Terre

3

ಸಂಬಂಧಿತ ಸುದ್ದಿ