ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬೆಳಗಾವಿ ಹಿಂಡಲಗಾ ಜೈಲಿಗೆ ಮಾಜಿ ಸಚಿವ ವಿನಯ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬಂಧಿಸಿದ ಸಿಬಿಐ, ಗುರುವಾರ ಸಂಜೆ ಅವರನ್ನು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪಂಚಾಕ್ಷರಿ ಎಚ್. ಅವರು ಒಂದು ದಿನದ ಮಟ್ಟಿಗೆ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ವಿನಯ್ ಕುಲಕರ್ಣಿ ಅವರ ಪರವಾಗಿ ವಕೀಲ ಬಾಹುಬಲಿ ದಾಂಡೇವಾಲೆ ಅವರು ವಕಲಾತ್ತು ವಹಿಸಿದ್ದರು. ಸಿಬಿಐ ಪರವಾಗಿ ಸುದರ್ಶನ ಅವರು ವಕಾಲತ್ತು ವಹಿಸಿದ್ದರು.

ಒಂದು ದಿನ ವಿನಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದರಿಂದ ಸಿಬಿಐ ಅಧಿಕಾರಿಗಳು ಅವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಕರೆದೊಯ್ದರು.

Edited By : Manjunath H D
Kshetra Samachara

Kshetra Samachara

05/11/2020 07:57 pm

Cinque Terre

124 K

Cinque Terre

26

ಸಂಬಂಧಿತ ಸುದ್ದಿ