ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿನಯ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬೆಳಗಾವಿ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿದೆ.

ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಧಾರವಾಡದ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ತಿಳಿಸಿದ್ದಾರೆ.

ಬೆಳಗಾವಿ ಹಿಂಡಲಗಾ ಜೈಲಿನಿಂದಲೇ ವಿನಯ್ ಅವರನ್ನು ವೀಡಿಯೋ ಕಾನ್ಫರನ್ಸ್ ಮೂಲಕ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಲಾಗುತ್ತಿದೆ. ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಕೊಲೆ ತನಿಖೆ ಇನ್ನೂ ನಡೆಯುತ್ತಿದ್ದು, ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಬೇಕು ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

23/11/2020 12:29 pm

Cinque Terre

66.81 K

Cinque Terre

0

ಸಂಬಂಧಿತ ಸುದ್ದಿ