ಧಾರವಾಡ: ನನ್ನ ಪತಿಯ ಹತ್ಯೆ ವಿಚಾರಣೆಗೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ನಡೆಸುತ್ತಿದ್ದು, ನಮ್ಮನ್ನು ವಿಚಾರಣೆ ನಡೆಸಿದಂತೆ ವಿನಯ ಕುಲಕರ್ಣಿ ಅವರನ್ನೂ ವಿಚಾರಣೆ ನಡೆಸುತ್ತಿದೆ ಎಂದು ಯೋಗೀಶಗೌಡ ಪತ್ನಿ ಮಲ್ಲಮ್ಮ ಗೌಡರ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಒಬ್ಬಳೇ ಕಾಂಗ್ರೆಸ್ ಪಕ್ಷ ಸೇರಿಲ್ಲ. ಬಿಜೆಪಿಯಲ್ಲಿದ್ದ ಅನೇಕ ಮಹಿಳೆಯರೂ ಕಾಂಗ್ರೆಸ್ ಸೇರಿದ್ದಾರೆ. ಆದರೆ, ನಾನು ಕಾಂಗ್ರೆಸ್ ಪಕ್ಷ ಸೇರಿದ್ದೇ ಒಂದು ದೊಡ್ಡ ಸುದ್ದಿಯಾಗಿದೆ. ನನ್ನ ಪತಿ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿ ಕ್ಷೇತ್ರದ ಅಭಿವೃದ್ಧಿ ಮಾಡಬೇಕು ಎಂದಿದ್ದರು. ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಸಿಬಿಐನಿಂದ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದಿದ್ದಾರೆ.
Kshetra Samachara
05/11/2020 12:32 pm