ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿನಯ ಹುಬ್ಬಳ್ಳಿಯಿಂದ ಧಾರವಾಡ ನ್ಯಾಯಾಲಯಕ್ಕೆ: ವಿನಯ ಕುಲಕರ್ಣಿ ಭವಿಷ್ಯ ನಿರ್ಧಾರ ಸಾಧ್ಯತೆ

ಹುಬ್ಬಳ್ಳಿ: ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಸಿಬಿಐ ವಿಚಾರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಸಿಬಿಐ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು.ಇಂದು ಸಿಬಿಐ ಕಸ್ಟಡಿ ಅಂತ್ಯಗೊಳ್ಳಲಿದ್ದು, 11 ಗಂಟೆಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಧಾರವಾಡದ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಕರೆತಂದು ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು.ವಿನಯ್ ಜೊತೆ ಮಲ್ಲಮ್ಮ ಸೇರಿದಂತೆ ಹಲವರನ್ನ ಕರೆ ತಂದು ವಿಚಾರಣೆ ನಡೆಸಿದ್ದಾರೆ.ಅಲ್ಲದೇ ಇನ್ನಷ್ಟು ವಿಚಾರಣೆ ಅಗತ್ಯ ಇದೆ ಎಂದು ಸಿಬಿಐ ಅಧಿಕಾರಿಗಳು ನ್ಯಾಯಾಲಯದಲ್ಲಿ ಕೇಳುವ ಸಾಧ್ಯತೆಯಿದೆ.

ವಿನಯ್ ಕುಲಕರ್ಣಿ ಪರ ರಾಜ್ಯ ಹಾಗೂ ಹೊರ ರಾಜ್ಯದಿಂದ ನಿಯೋಜಿಸಲ್ಪಟ್ಟ ನ್ಯಾಯವಾದಿಗಳ ತಂಡದಿಂದ ವಾದಮಂಡನೆ ಮಾಡಲಿದ್ದು,ವಿನಯ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರಗೊಳ್ಳುವ ಸಾಧ್ಯತೆ ಹೆಚ್ಚಿದ್ದು,ಇಂದು ವಿನಯ್ ಗೆ ನ್ಯಾಯಾಲಯ ಮತ್ತೆ ಸಿಬಿಐ ಕಸ್ಟಡಿಗೆ ನೀಡುತ್ತಾ..?ಎಂಬುವಂತ ಪ್ರಶ್ನೆ ಎದುರಾಗಿದ್ದು,ನ್ಯಾಯಾಲಯದಲ್ಲಿ ಏನಾಗಲಿದೆ ವಿನಯ್ ಭವಿಷ್ಯ ಎಂಬುವುದನ್ನು ಕಾದು ನೋಡಬೇಕಿದೆ.

ಈಗಾಗಲೇ ಎಲ್ಲ ರೀತಿಯ ಸಿದ್ದತೆಯನ್ನು ಸಿಬಿಐ ಅಧಿಕಾರಿಗಳು ಮಾಡಿಕೊಳ್ಳುತ್ತಿದ್ದು,ಧಾರವಾಡದ ಉಪನಗರ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯದ ಆವರಣದಲ್ಲಿ ಬೀಗಿ ಪೊಲೀಸ್ ಬಂದೋಬಸ್ತ್ ಕೂಡ ನಿಯೋಜನೆ ಮಾಡಲಾಗಿದೆ.

Edited By : Manjunath H D
Kshetra Samachara

Kshetra Samachara

09/11/2020 11:50 am

Cinque Terre

75.06 K

Cinque Terre

1

ಸಂಬಂಧಿತ ಸುದ್ದಿ