ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಅವಧಿ ಪೂರ್ಣಗೊಂಡಿದ್ದು, ಇಂದು ಬೆಳಿಗ್ಗೆ 11.30ಕ್ಕೆ ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಬೇಕಾಗಿತ್ತು. ಆದರೆ, ಇದುವರೆಗೂ ವಿನಯ್ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿಲ್ಲ. ಸಿಬಿಐ, ವೀಡಿಯೋ ಕಾನ್ಫರನ್ಸ್ ಮೂಲಕ ವಿನಯ್ ಅವರನ್ನು ಧಾರವಾಡದ 2ನೇ ಹೆಚ್ಚುವರಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿನಯ್ ಅವರ ಬೆಂಬಲಿಗರು ದೊಡ್ಡಮಟ್ಟದಲ್ಲಿ ಜಿಲ್ಲಾ ನ್ಯಾಯಾಲಯದ ಎದುರು ಹಾಜರಾಗಬೇಕು ಎಂದು ಕರೆ ಕೊಟ್ಟ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ವೀಡಿಯೋ ಕಾನ್ಫರನ್ಸ್ ಮೂಲಕ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಈಗಾಗಲೇ ಧಾರವಾಡದ ಜಿಲ್ಲಾ ನ್ಯಾಯಾಲಯದ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದ್ದು, ವಿನಯ್ ಅವರ ಬೆಂಬಲಿಗರು ಕೂಡ ಅಲ್ಲಲ್ಲಿ ನಿಂತು ಅವರಿಗಾಗಿ ಕಾಯುತ್ತಿದ್ದಾರೆ.
Kshetra Samachara
09/11/2020 12:10 pm