ಧಾರವಾಡ: ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಜಾಮೀನಿಗೆ ಧಾರವಾಡದ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಹಿನ್ನೆಲೆ ಮಾಜಿ ಸಚಿವರ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಆ ಅರ್ಜಿಯನ್ನು ಕೊರೊನಾ ಹಿನ್ನೆಲೆಯಲ್ಲಿ ಸ್ಯಾನಿಟೈಜೇಶನ್ ಮಾಡಿ 24 ಗಂಟೆಗಳ ಕಾಲ ಇಟ್ಟು ನಂತರ ನ್ಯಾಯಾಧೀಶರಿಗೆ ಹಾಜರುಪಡಿಸಲಾಗುತ್ತದೆ.
ಸೋಮವಾರ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಕೋರ್ಟ್ಗೆ ಹಾಜರು ಪಡಿಸಬೇಕಿತ್ತು. ಆದರೆ, ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ನವೆಂಬರ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಸೋಮವಾರ ಸಂಜೆಯೇ ವಿನಯ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯುವ ಸಾಧ್ಯತೆಯಿದೆ.
Kshetra Samachara
11/11/2020 10:52 am