ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಹಿಂದೆ ಜಿಲ್ಲೆಯಲ್ಲಿ ರಾಜಕೀಯ ಒತ್ತಡ ಹೇರುವ ಕ್ರಮಗಳು ನಡೆದಿವೆ. ಇದು ನೋವಿನ ಹಾಗೂ ಖಂಡನೀಯ ವಿಚಾರ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.
ನಗರದ ಬಾರಾಕೊಟ್ರೆಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಮನೆಗೆ ಭೇಟಿ ನೀಡಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ದುರುಪಯೋಗ ಮಾಡಿಕೊಳ್ಳುತ್ತಿದೆ. ಸಿಬಿಐ, ಇಡಿ, ಐಟಿ ಸಂಸ್ಥೆಗಳನ್ನು ದುರಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ಹಲವಾರು ಕಡೆ ನೋಡಿದ್ದೇವೆ. ಬಿಜೆಪಿಯ ಈ ನಡೆಯನ್ನು ದೇಶವೇ ಗಮನಿಸುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.
ರಾಜಕೀಯದಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಶಕ್ತಗೊಳಿಸುವ ಕೆಲಸಕ್ಕೆ ಕೈ ಹಾಕಬಾರದು. ಕಾನೂನಿನ ಎದುರು ಎಲ್ಲರೂ ಸಮಾನರು. ಭಯ ಹುಟ್ಟಿಸುವ ರಾಜಕಾರಣವನ್ನು ಯಾರೂ ಮಾಡಬಾರದು ಎಂದು ಒತ್ತಾಯಿಸಿದರು.
Kshetra Samachara
15/11/2020 04:18 pm