ಧಾರವಾಡ: ಅಗ್ನಿಪಥ್ ಯೋಜನೆಗೆ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.
ಅಗ್ನಿಪಥ್ ಮಹತ್ತರವಾದ ಯೋಜನೆ. ನಾಲ್ಕು ವರ್ಷದ ಸರ್ವಿಸ್ ಬಳಿಕ ಬೇಕಾದ ನೌಕರಿ ಸೇರಬಹುದು. ಅದರಲ್ಲಿ ಮೀಸಲಾತಿ ಸಹ ಕೂಡುತ್ತಿದ್ದಾರೆ ಎಂದು ಯೋಜನೆ ಸಮರ್ಥನೆ ಮಾಡಿಕೊಂಡರು.
ಪ್ರತಿಭಟನೆ ಮಾಡುವವರೆಲ್ಲ ಆರ್ಮಿ ಸೇರಬಯಸುವವರು ಅಲ್ವಾ? ಆರ್ಮಿಗೆ ಹೋಗೋ ಉದ್ದೇಶ ದೇಶ ರಕ್ಷಣೆ ದೇಶ ಪ್ರೇಮ ತೋರಿಸುವವರು ರೈಲ್ವೆಗೆ ಬೆಂಕಿ ಹಾಕ್ತಾರಾ? ಜನರಿಗೆ ತೊಂದರೆ ಕೊಟ್ಟು ದೇಶ ಕಾಯೋಕೆ ಆಗುತ್ತಾ ಇದೆಲ್ಲವೂ ಕಿಡಿಗೇಡಿಗಳ ಕುತಂತ್ರ. ಕೆಲವರು ಉದ್ದೇಶಪೂರ್ವಕವಾಗಿ ಪ್ರಚೋದಿಸುತ್ತಿದ್ದಾರೆ. ಇದಕ್ಕೆ ಯುವಕರು ಬಲಿಯಾಗಬಾರದು ಎಂದರು.
ಕಾಂಗ್ರೆಸ್ ಪಕ್ಷ ಎಲ್ಲ ಕಡೆ ಅದೇ ಕೆಲಸ ಮಾಡುತ್ತಿದೆ. ರಾಹುಲ್ ಗಾಂಧಿಗೆ ವಿಚಾರಣೆಗೆ ಕರೆದರೆ ಪ್ರತಿಭಟನೆ ಮಾಡಿದ್ರು ಹಿಂದೆ ಖರ್ಗೆಯವರನ್ನೂ ಇಡಿ ವಿಚಾರಣೆಗೆ ಕರೆದಿತ್ತು ಆಗ ಒಬ್ಬರೂ ಪ್ರತಿಭಟನೆಗೆ ಬರಲಿಲ್ಲ . ರಾಹುಲ್, ಸೋನಿಯಾ ಗಾಂಧಿಯನ್ನು ಕರೆದು ವಿಚಾರಣೆ ಮಾಡಬಾರದು ಅಂದ್ರೆ ಹೇಗೆ? ಈ ದೇಶದಲ್ಲಿ ನ್ಯಾಯ, ಸಂವಿಧಾನಕ್ಕೆ ಎಲ್ಲರೂ ತಲೆ ಬಾಗಬೇಕು. ಕರೆಯಬಾರದು ಅಂತಾ ಧಮ್ಕಿ ಹಾಕಿದ್ರೆ ಹೇಗೆ? ನಾಳೆ ಯಾರೋ ಒಬ್ಬ ಕೊಲೆ ಮಾಡ್ತಾನೆ ಅವನನ್ನು ಬಂಧಿಸಬೇಡಿ ಅಂತಾ ಪ್ರತಿಭಟಿಸ್ತಾರಾ? ಕಾಂಗ್ರೆಸ್ ಸರ್ಕಾರ ಇದ್ದಾಗಲೇ ದೂರು ದಾಖಲಾಗಿದೆ. ಇಡಿ ಪ್ರಧಾನಿ ಮಾತು ಕೇಳುತ್ತೆ ಅಂತಾರೆ ಹಾಗಾದ್ರೆ ಆಗ ಪಿಎಂ ಇದ್ದ ಮನಮೋಹನಸಿಂಹ್ ಕೇಸ್ ಆಗದಂತೆ ಮಾಡುತ್ತಿದ್ದರಲ್ವಾ? ಇಡಿ ಸ್ವತಂತ್ರವಾದ ಸಂಸ್ಥೆ ಕಾನೂನು ಬದ್ಧವಾಗಿ ಕೆಲಸ ಮಾಡಲು ಬಿಡಬೇಕು ಎಂದರು.
Kshetra Samachara
19/06/2022 09:29 pm