ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿನಯ್ ಗೆ ಮತ್ತೆ ಶಾಕ್ ನೀಡಿದ ನ್ಯಾಯಾಲಯ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದಡಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ.

ಇಂದು ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ಸಿಬಿಐ ಅಧಿಕಾರಿಗಳು ವಿನಯ್ ಅವರನ್ನು ವೀಡಿಯೋ ಕಾನ್ಫರನ್ಸ್ ಮೂಲಕ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಜ.22 ರವರೆಗೆ ಮತ್ತೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಶಾಕ್ ನೀಡಿದೆ.

ಇನ್ನು ಯೋಗೀಶಗೌಡ ಕೊಲೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎಂಬ ಆರೋಪದಡಿ ಬಂಧಿತರಾಗಿರುವ ವಿನಯ್ ಕುಲಕರ್ಣಿ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರದ್ದೂ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಇವರ ನ್ಯಾಯಾಂಗ ಬಂಧನದ ಅವಧಿಯನ್ನೂ ಜ.22 ರವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿತು.

Edited By : Nirmala Aralikatti
Kshetra Samachara

Kshetra Samachara

08/01/2021 02:46 pm

Cinque Terre

78.57 K

Cinque Terre

2

ಸಂಬಂಧಿತ ಸುದ್ದಿ