ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿನಯ ಕುಲಕರ್ಣಿಗೆ ತಪ್ಪದ ಸಂಕಷ್ಟ

ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ, ವಿನಯ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಣೆ ಮಾಡಿದೆ.

ಫೆ.19 ರ ವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ. ಈಗಾಗಲೇ ವಿನಯ್ ಅವರು ಬಂಧನಕ್ಕೊಳಗಾಗಿ ಮೂರು ತಿಂಗಳು ಕಳೆದಿವೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇವರು ಸೆರೆವಾಸ ಅನುಭವಿಸುತ್ತಿದ್ದರೆ, ಶಸ್ತ್ರಾಸ್ತ್ರ ಪೂರೈಕೆ ಆರೋಪದಡಿ ಬಂಧಿತರಾಗಿರುವ ವಿನಯ್ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರು ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

04/02/2021 01:08 pm

Cinque Terre

62.7 K

Cinque Terre

0

ಸಂಬಂಧಿತ ಸುದ್ದಿ