ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಮೇಲೆ ಧಾರವಾಡದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸಿಬಿಐ ಸಲ್ಲಿಸಿದ್ದ ಸಾಕ್ಷ್ಯ ನಾಶ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಧಾರವಾಡ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ಪ್ರಕರಣವನ್ನೂ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ವಿನಯ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ವಿನಯ್ ಅವರ ಮೇಲಿರುವ ಸಾಕ್ಷ್ಯ ನಾಶ ಪ್ರಕರಣವನ್ನೂ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.
Kshetra Samachara
15/02/2021 07:04 pm