ಧಾರವಾಡ: ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣವನ್ನು ಖಂಡಿಸಿ ಧಾರವಾಡದಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಧಾರವಾಡದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮುಖಂಡರು, ಟಿಕಾಯತ್ ಅವರ ಮುಖಕ್ಕೆ ಮಸಿ ಬಳಿದವರ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ಅವರನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನ ಗಾಂಧಿಭವನದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಟಿಕಾಯತ್ ಅವರ ಮುಖಕ್ಕೆ ಮಸಿ ಬಳೆಯಲಾಗಿದೆ.
Kshetra Samachara
31/05/2022 01:37 pm