ಹುಬ್ಬಳ್ಳಿ: ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕೊಲೆಯ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
" ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಪರಿಹಾರವನ್ನು ಕೂಡ ಕೊಟ್ಟಿದ್ದಾರೆ.
ಆದ್ರೆ, ಇಷ್ಟಕ್ಕೇ ನಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ಯಾರು ಪ್ರವೀಣನನ್ನು ಕೊಲೆ ಮಾಡಿ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೋ ಅಂಥವರನ್ನು ಮಟ್ಟ ಹಾಕಲು ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/07/2022 08:03 pm