ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಮುಗಲಭೆ ಪ್ರಕರಣ: ಕೆಲವೇ ಕ್ಷಣಗಳಲ್ಲಿ ಆರೋಪಿಗಳು ಕೋರ್ಟ್ ಗೆ ಹಾಜರು

ಹುಬ್ಬಳ್ಳಿ: ಮೊನ್ನೆ ನಡೆದ ಕೋಮುಗಲಭೆಯ ಹಿನ್ನೆಲೆಯಲ್ಲಿ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹುಬ್ಬಳ್ಳಿಯ ಕೋರ್ಟ್ ಗೆ ಇಂದು ಹಾಜರು ಪಡಿಸಲು ಸಕಲ ಸಿದ್ಧತೆಯನ್ನು ಮಾಡಲಾಗುತ್ತಿದೆ.

ಹೌದು.. ಕೋಮುಗಲಭೆ ಸೃಷ್ಟಿಸುವ ವಿಡಿಯೋ ಪೋಸ್ಟ್ ಮಾಡಿದ ಅಭಿಷೇಕ ಹಿರೇಮಠ ಹಾಗೂ ಬಂಧಿತ 88 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿ ನಾಲ್ವರು ಬಾಲಾಪರಾಧಿಗಳು ಇರುವುದು ಬೆಳಕಿಗೆ ಬಂದಿದೆ. ಅಲ್ಲದೆ ಇಂದು ಬಂಧಿತ ಆರೋಪಿಗಳನ್ನು ಹುಬ್ಬಳ್ಳಿಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಇನ್ನೂ ಕೆಲವೇ ಕ್ಷಣಗಳಲ್ಲಿ ಹಾಜರು ಪಡಿಸಲಾಗುತ್ತದೆ.

ಈಗಾಗಲೇ ಪೊಲೀಸ್ ಇಲಾಖೆಯಿಂದ ಕೋರ್ಟ್ ಆವರಣದಲ್ಲಿ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/04/2022 12:32 pm

Cinque Terre

142.61 K

Cinque Terre

24

ಸಂಬಂಧಿತ ಸುದ್ದಿ