ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ನಿನ್ನೆಯಷ್ಟೆ ಧಾರವಾಡದ ಹೈಕೋರ್ಟ್ ವಿನಯ್ ಅವರ ಜಾಮೀನು ಅರ್ಜಿ ವಜಾಗೊಳಿಸಿ ಶಾಕ್ ನೀಡಿದೆ. ಇದೀಗ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಕೂಡ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಇಂದು ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ವಿನಯ್ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ವೀಡಿಯೋ ಕಾನ್ಫರನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಫೆ.4ರವರೆಗೂ ವಿನಯ್ ಅವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿತು.
ಇತ್ತ ಯೋಗೀಶಗೌಡ ಹತ್ಯೆಗೆ ಶಸ್ತ್ರಾಸ್ತ್ರ ಪೂರೈಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿತರಾಗಿರುವ ವಿನಯ್ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನದ ಅವಧಿ ಕೂಡ ಇಂದು ಮುಕ್ತಾಯಗೊಂಡಿತ್ತು. ಅವರ ನ್ಯಾಯಾಂಗ ಬಂಧನದ ಅವಧಿಯನ್ನೂ ಫೆ.4 ರವರೆಗೆ ನ್ಯಾಯಾಲಯ ವಿಸ್ತರಣೆ ಮಾಡಿದೆ.
Kshetra Samachara
22/01/2021 07:58 pm