ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಲೈಂಗಿಕ ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ನಿಂದ ಮೊಂಬತ್ತಿ ಪ್ರತಿಭಟನೆ

ಧಾರವಾಡ: ಇತ್ತೀಚೆಗೆ ದೇಶದಲ್ಲಿ ಹೆಚ್ಚಾಗುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಯೂಥ್ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ರಾತ್ರಿ ಧಾರವಾಡದ ಸಪ್ತಾಪುರ ವೃತ್ತದಲ್ಲಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ನೈಋತ್ಯ ದೆಹಲಿಯ ಹಳೆಯ ನಂಗಲ್ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಮಾನವೀಯ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಇದು ಉತ್ತರ ಪ್ರದೇಶದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಘಟನೆಯನ್ನು ನೆನಪಿಸುವಂತಿದೆ. ದೇಶದಲ್ಲಿ ಈ ರೀತಿಯ ಘಟನಾವಳಿಗಳು ನಡೆಯುತ್ತಲೇ ಇದ್ದು, ಸರ್ಕಾರ ಇವುಗಳನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ಸಂಬಂಧ ಸರ್ಕಾರ ಕಠಿಣ ಕಾನೂನುಗಳನ್ನು ರೂಪಿಸಬೇಕು ಎಂದು ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

Edited By : Shivu K
Kshetra Samachara

Kshetra Samachara

07/08/2021 09:28 am

Cinque Terre

35.37 K

Cinque Terre

5

ಸಂಬಂಧಿತ ಸುದ್ದಿ