ಧಾರವಾಡ: ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ನಡುರಸ್ತೆಯಲ್ಲೇ ಮಹಿಳೆಯೊಬ್ಬರ ಕೈ ಹಿಡಿದು ಎಳೆದಾಡಿದ ಪ್ರಕರಣ ಸತ್ತೂರಿನ ಎಸ್‌ಡಿಎಂ ದಂತ ವೈದ್ಯಕೀಯ ಕಾಲೇಜು ಬಳಿ ನಡೆದಿದೆ.
ಅನುಮತಿ ಅತ್ತಿಗೇರಿ ಎಂಬ ಮಹಿಳೆ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಶ್ರೀಕಾಂತ ಮನೆಯೊಳಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ. ಗಲಾಟೆ ಬಿಡಿಸಲು ಬಂದವರಿಗೆ ಬೆದರಿಕೆ ಹಾಕಿರುವ ಅವರು, ಮಹಿಳೆಯನ್ನು ರಸ್ತೆಯಲ್ಲಿ ಎಳೆದಾಡಿದ್ದಾರೆ. ಈ ವಿಡಿಯೊ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಈ ಸಂಬಂಧ ಅನುಮತಿ ಅತ್ತಿಗೇರಿ ಅವರು ಶುಕ್ರವಾರ ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Kshetra Samachara
12/09/2021 08:50 am