ಹುಬ್ಬಳ್ಳಿ: ಆನ್‌ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಅದರಲ್ಲೂ ರಾಜಕೀಯ ನಾಯಕರು, ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನಕಲಿ ಫೆಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುವ ಪ್ರಕರಣಗಳು ಹೆಚ್ಚಾಗಿವೆ.
ಅಂತದೇ ಮತ್ತೊಂದು ಪ್ರಕರಣ ನಡೆದಿದೆ. ಧಾರವಾಡ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಫೆಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಸಾಮಾಜಿಕ ಜಾಲತಾಣದ ಫೇಸ್ಬುಕ್ನಲ್ಲಿ ಹೆಸರಿನ ನಕಲಿ ಖಾತೆ ತೆರೆದು ವಿವಿಧ ಜನರಿಗೆ ಮೇಸ್ಸೆಂಜರ್ ನಲ್ಲಿ ಫೋನ್ ಪೆ ಮುಖಾಂತರ ಹಣ ಕೇಳುತ್ತಿರುವದು ಅನಿಲ್ ಕುಮಾರ್ ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಅವರು ಹು-ಧಾ ಸೈಬರ ಕ್ರೈಮ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ದೂರುನ್ನು ಸಲ್ಲಿಸಿದ್ದಾರೆ. ಅದರ ಜೊತೆಗೆ ಇಂತ ಸಾಕಷ್ಟಿ ಪ್ರಕರಣಗಳು ನಡೆಯುತ್ತಿದ್ದು ಜನರು ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
Kshetra Samachara
14/09/2021 08:46 pm