ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಶಕ್ಕೆ ಪಡೆದಿದ್ದ ಐವರನ್ನು ಬಿಡುಗಡೆ ಮಾಡಿದ ಪೊಲೀಸರು

ಧಾರವಾಡ: ನಿನ್ನೆ ರಾತ್ರಿ ಗಣೇಶ ವಿಸರ್ಜನೆ ವೇಳೆ ಧಾರವಾಡದ ಹೊಸಯಲ್ಲಾಪುರದ ಬಳಿ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಐವರನ್ನು ವಶಕ್ಕೆ ಪಡೆದಿದ್ದ ಶಹರ ಠಾಣೆ ಪೊಲೀಸರು ಇಂದು ಅವರನ್ನು ಬಿಡುಗಡೆ ಮಾಡಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಗಣೇಶೋತ್ಸವ ಮಂಡಳದ ಸದಸ್ಯರು ಹಾಗೂ ಕೆಲ ಬಿಜೆಪಿ ಮುಖಂಡರು ಶಹರ ಠಾಣೆ ಎದುರು ಜಮಾಯಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿ, ವಶಕ್ಕೆ ಪಡೆದ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದರು.

ಈ ಪ್ರತಿಭಟನೆಗೆ ಮಣಿದ ಪೊಲೀಸರು ವಶಕ್ಕೆ ಪಡೆದಿದ್ದ ಐವರೂ ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದಾರೆ.

Edited By : Shivu K
Kshetra Samachara

Kshetra Samachara

17/09/2021 02:10 pm

Cinque Terre

37.19 K

Cinque Terre

0

ಸಂಬಂಧಿತ ಸುದ್ದಿ