ಧಾರವಾಡ: ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಕೃತ್ಯ ಖಂಡಿಸಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ಸದಸ್ಯರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಬೀಡು ಬಿಟ್ಟಿದ್ದ, ಬೈಲಹೊಂಗಲ ತಾಲ್ಲೂಕಿನ ವನ್ನೂರು ಗ್ರಾಮದ ಸಂಚಾರಿ ಕುರಿಗಾಹಿ ಮಹಿಳೆ ಲಕ್ಷ್ಮೀ ವಿಠಲ ಕಳ್ಳಿಮನಿ ಅವರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು ಈ ಕೃತ್ಯ ಖಂಡಿಸಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಇದು ಅತ್ಯಂತ ಹೇಯ ಕೃತ್ಯವಾಗಿದೆ. ಕುರಿಗಾಹಿ ಮಹಿಳೆ ಮೇಲೆ ಆತ್ಯಾಚಾರ ಎಸಗಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಮೃತಳ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ. ಪರಿಹಾರ ನೀಡಬೇಕು. ಮೃತ ಮಹಿಳೆಯ ಮೂರು ಮಕ್ಕಳಿಗೆ ಸರ್ಕಾರ ಉಚಿತವಾಗಿ ವಿದ್ಯಾಭ್ಯಾಸ ನೀಡಬೇಕು. ಅತ್ಯಾಚಾರಿ ಆರೋಪಿಯ ಜಮೀನು ವಶಕ್ಕೆ ಪಡೆದು ಮೃತಳ ಕುಟುಂಬಕ್ಕೆ ಹಂಚಿಕೆ ಮಾಡಬೇಕೆಂದು ಸರ್ಕಾರಕ್ಕೆ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
Kshetra Samachara
21/02/2022 03:22 pm