ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಹರ್ಷ ಹತ್ಯೆಗೆ ಖಂಡಿಸಿ, ನಗರದ ರಾಯಣ್ಣ ವೃತ್ತದಲ್ಲಿಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಿದರು.
ಹರ್ಷನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ, ಸಾಂಕೇತಿಕವಾಗಿ ಪ್ರತಿಭಟನೆ ಮಾಡ್ತಿದ್ದೇವೆ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ತಕ್ಷಣ ಇದರ ಹಿಂದಿರುವ ಸಂಘಟನೆಗಳನ್ನು ನಿಷೇಧಿಸಬೇಕು.
ಕೊಲೆಗಡುಕರ ವಿರುದ್ಧ ನಿರ್ದಾಕ್ಷಿಣ್ಯವಾಗಿಯೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
23/02/2022 12:30 pm