ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕುರಿಗಾಹಿ ಮಹಿಳೆಯ ಸಾವಿಗೆ ನ್ಯಾಯಕೊಡಿ: ಗಲ್ಲು ಶಿಕ್ಷೆ ನೀಡಿ ಪಾಠ ಕಲಿಸಿ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದಲ್ಲಿ ನಡೆದ ಕುರಿಗಾಹಿ ಮಹಿಳೆ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರಿಂದ ದಿಢೀರ್ ರಸ್ತೆ ತಡೆಗೆ ಯತ್ನ ನಡೆಸಿದ್ದು, ಹುಬ್ಬಳ್ಳಿ ನಗರದಲ್ಲಿ ಕೆಲ ಸಮಯ ಫುಲ್ ಟ್ರಾಫಿಕ್ ಜಾಮ್ ಆಗಿತ್ತು. ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.

ಇನ್ನೂ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ

ಪ್ರತಿಭಟನೆ ನಡೆಸಿದ್ದು, ನಗರದ ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

Edited By : Shivu K
Kshetra Samachara

Kshetra Samachara

24/02/2022 01:12 pm

Cinque Terre

35.61 K

Cinque Terre

0

ಸಂಬಂಧಿತ ಸುದ್ದಿ