ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಗಂಗಾಧರನ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಬಂಧನ

ಧಾರವಾಡ: ನವಲಗುಂದ ತಾಲೂಕಿನ ಬಸಾಪುರ ಗ್ರಾಮದ ಗಂಗಾಧರ ತೊರವಿ ಎಂಬುವವರ ಮೇಲೆ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ನವಲಗುಂದ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಸಾಪುರ ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಲ್ಲಿ ನವಲಗುಂದ ತಹಶೀಲ್ದಾರ ಸಾಕಷ್ಟು ಭ್ರಷ್ಟಾಚಾರ ಎಸಗಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಗಂಗಾಧರ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರು ಕೊಟ್ಟಿದ್ದಕ್ಕೆ ಗಂಗಾಧರನ ಮೇಲೆ ಮೊನ್ನೆಯಷ್ಟೇ ಹಲ್ಲೆ ನಡೆದಿತ್ತು. ಹಲ್ಲೆ ಸಂಬಂಧ ನವಲಗುಂದ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದರು.

ಸದ್ಯ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಗಂಗಾಧರನ ಮೇಲೆ ಹಲ್ಲೆ ನಡೆಸಲು ಕಾರಣ ಏನು? ಹಲ್ಲೆ ನಡೆಸಲು ಹೇಳಿದವರು ಯಾರು? ಎಂಬುದರ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

Edited By : Shivu K
Kshetra Samachara

Kshetra Samachara

08/03/2022 08:05 am

Cinque Terre

35.13 K

Cinque Terre

1

ಸಂಬಂಧಿತ ಸುದ್ದಿ